ADVERTISEMENT

‘ಒಲಾಂಡ್‌ ವಿರುದ್ಧವೇ ಭ್ರಷ್ಟಾಚಾರ ಆರೋಪ’

ಪಿಟಿಐ
Published 29 ಸೆಪ್ಟೆಂಬರ್ 2018, 19:49 IST
Last Updated 29 ಸೆಪ್ಟೆಂಬರ್ 2018, 19:49 IST

ಚೆನ್ನೈ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಆರೋಪ ಮಾಡಿರುವ ಫ್ರಾನ್ಸ್‌ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್‌ ಒಲಾಂಡ್‌ ಖುದ್ದು ಭ್ರಷ್ಟಾಚಾರ ಆರೋಪದಲ್ಲಿ ಸಿಲುಕಿದ್ದಾರೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಆರೋಪಿಸಿದ್ದಾರೆ.

ಒಲಾಂಡ್‌ ಅವರ ಸಂಗಾತಿ ಹಾಗೂ ನಟಿ ಜ್ಯೂಲಿ ಗಯೇಟ್‌ ಅವರು ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒಲಾಂಡ್‌ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT