ADVERTISEMENT

ರಫೇಲ್‌ ಒಪ್ಪಂದ: ಮಾರ್ಚ್‌ 6ಕ್ಕೆ ಪುನರ್‌ಪರಿಶೀಲನೆ ಅರ್ಜಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 18:45 IST
Last Updated 2 ಮಾರ್ಚ್ 2019, 18:45 IST
   

ನವದೆಹಲಿ:ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌ನಲ್ಲಿ ನೀಡಿರುವ ತೀರ್ಪು ಪುನರ್‌ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮಾರ್ಚ್‌ 6 ರಂದು ನಡೆಸಲಿದೆ.

ತೆರೆದ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್‌ ಮತ್ತು ಕೆ.ಎಂ. ಜೋಸೆಫ್‌ ಅವರನ್ನು ಒಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.

ADVERTISEMENT

ಭಾರತ ಮತ್ತು ಫ್ರಾನ್ಸ್‌ ನಡುವೆ 36 ರಫೇಲ್‌ ಯುದ್ಧವಿಮಾನಗಳ ಖರೀದಿಗೆ ಸಂಬಂಧಿಸಿದ ಒಪ್ಪಂದವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕಳೆದ ಡಿಸೆಂಬರ್‌ 14ರಂದು ವಜಾಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.