ADVERTISEMENT

ಚುನಾವಣಾ ಫಲಿತಾಂಶ ಪ್ರಕಟವಾಗುವ ದಿನದವರೆಗೆ ಪ್ರಜ್ಞಾ ಠಾಕೂರ್ ಮೌನವ್ರತ

​ಪ್ರಜಾವಾಣಿ ವಾರ್ತೆ
Published 20 ಮೇ 2019, 13:05 IST
Last Updated 20 ಮೇ 2019, 13:05 IST
   

ನವದೆಹಲಿ: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿ ವಿವಾದಕ್ಕೀಡಾಗಿದ್ದ ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮೌನ ವ್ರತಾಚರಣೆ ಮಾಡಲಿದ್ದಾರೆ.

ಚುನಾವಣೆ ಮುಗಿದ ಮೇಲೆ ಇದು ಚಿಂತನೆಯ ಸಮಯ.ನನ್ನ ಹೇಳಿಕೆಗಳು ಭಾವನೆಗೆ ಧಕ್ಕೆ ತಂದಿದೆ.ಅದಕ್ಕಾಗಿ ನಾನು ಕ್ಷಮೆ ಕೇಳಿದ್ದೇನೆ.ನಾನು21 ಪ್ರಹರ್ (ಮೂರು ದಿನ) ಮೌನ ವ್ರತ ಪಾಲಿಸಲಿದ್ದೇನೆ ಎಂದುಪ್ರಜ್ಞಾ ಟ್ವೀಟಿಸಿದ್ದಾರೆ.

ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಪ್ರಜ್ಞಾ ಸಿಂಗ್. ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್ ಕಣದಲ್ಲಿದ್ದಾರೆ.

ADVERTISEMENT

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಅಂದರೆ ಗುರುವಾರ ಪ್ರಜ್ಞಾ ಅವರ ಮೌನವ್ರತ ಮುಗಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.