ರಾಹುಲ್ ಗಾಂಧಿ
–ಪಿಟಿಐ ಚಿತ್ರ
ನವದೆಹಲಿ: ‘ಚುನಾಯಿತ ರಾಜ್ಯ ಸರ್ಕಾರಗಳ ಧ್ವನಿ ಅಡಗಿಸಲು ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.
‘ಕೇಂದ್ರದ ಈ ನಿಲುವು, ಒಕ್ಕೂಟ ವ್ಯವಸ್ಥೆಯ ಮೇಲೆ ಅಪಾಯಕಾರಿ ಆಕ್ರಮಣವಾಗಿದೆ’ ಎಂದಿದ್ದಾರೆ.
‘ದೇಶದ ಪ್ರತಿಯೊಂದು ರಾಜ್ಯವು ತನ್ನದೇ ಆದ ಧ್ವನಿಯನ್ನು ಹೊಂದಿರುವುದರಿಂದ, ಕೇಂದ್ರದ ಈ ನಿಲುವನ್ನು ಎಲ್ಲ ರಾಜ್ಯಗಳು ವಿರೋಧಿಸಬೇಕು’ ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.
‘ಭಾರತದ ಶಕ್ತಿ ಅದರ ವೈವಿಧ್ಯದಲ್ಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿದೆ. ಪ್ರತಿಯೊಂದು ರಾಜ್ಯವೂ ತನ್ನದೇ ಆದ ಧ್ವನಿಯನ್ನು ಹೊಂದಿದ್ದು, ಇದನ್ನು ಹತ್ತಿಕ್ಕಲು ಮತ್ತು ಚುನಾಯಿತ ರಾಜ್ಯ ಸರ್ಕಾರಕ್ಕೆ ಅಡ್ಡಿಯುಂಟು ಮಾಡಲು ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದಿದ್ದಾರೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪೋಸ್ಟ್‌ನ್ನು ರಾಹುಲ್ ಗಾಂಧಿ ಟ್ಯಾಗ್ ಮಾಡಿದ್ದು, ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.