ADVERTISEMENT

ದೇಶವೇ ಅಸ್ಸಾಂ ಜೊತೆಗಿದೆ: ರಾಹುಲ್‌

ಪಿಟಿಐ
Published 18 ಜುಲೈ 2020, 11:43 IST
Last Updated 18 ಜುಲೈ 2020, 11:43 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ:‘ಭೀಕರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಅಸ್ಸಾಂ ಜೊತೆಗೆ ಇಡೀ ದೇಶವೇ ಇದೆ. ಪ್ರಕೃತಿ ವಿಕೋಪದಿಂದ ಎದುರಾಗಿರುವ ಸಂಕಷ್ಟವನ್ನು ಅಲ್ಲಿಯ ಜನರು ಸಮರ್ಥವಾಗಿ ಎದುರಿಸಲಿದ್ದಾರೆ’ ಎಂಬ ವಿಶ್ವಾಸವನ್ನುಸಂಸದ ರಾಹುಲ್‌ ಗಾಂಧಿ ವ್ಯಕ್ತಪಡಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಅವರು ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ 35 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ರಾಜ್ಯದಲ್ಲಿ ಈ ವರ್ಷ 102ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.