ADVERTISEMENT

ಸ್ಥಾಯಿ ಸಮಿತಿಯ ಯಾವುದೇ ಸಭೆಯಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಿಲ್ಲ

ಪಿಟಿಐ
Published 6 ಜುಲೈ 2020, 8:10 IST
Last Updated 6 ಜುಲೈ 2020, 8:10 IST
ಜೆ.ಪಿ. ನಡ್ಡಾ
ಜೆ.ಪಿ. ನಡ್ಡಾ   

ನವದೆಹಲಿ: ವಯನಾಡು ಸಂಸದ ರಾಹುಲ್‌ ಗಾಂಧಿ ಈವರೆಗೆ ರಕ್ಷಣಾ ಖಾತೆಯ ಸಂಸದೀಯ ಸ್ಥಾಯಿ ಸಮಿತಿಯ ಯಾವುದೇ ಸಭೆಯಲ್ಲಿ ಭಾಗವಹಿಸಿಲ್ಲ. ಆದರೂ ಸಶಸ್ತ್ರ ಪಡೆಯ ಶೌರ್ಯವನ್ನು‍ಪ್ರಶ್ನಿಸುವ ಮೂಲಕ ಸ್ಥೈರ್ಯಗೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನಡ್ಡಾ, ವಿರೋಧ ಪಕ್ಷದ ನಾಯಕನಾಗಿ ಅವರು ಈ ರೀತಿಯ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದಿದ್ದಾರೆ.

ರಾಹುಲ್‌ ಅವರ ವಂಶದ ಪರಂಪರೆಯಲ್ಲಿ ರಕ್ಷಣಾ ಖಾತೆಗೆ ಸಂಬಂಧಿಸಿದ ಸಮಿತಿಗೆ ಯಾವುದೇ ಬೆಲೆ ಇಲ್ಲ. ಕೇವಲ ಕಮಿಷನ್‌ಗಷ್ಟೇ ಮಹತ್ವ. ಸಂಸದೀಯ ಮಾಹಿತಿಗಳನ್ನು ಅರ್ಥೈಸಿಕೊಳ್ಳ ಬಲ್ಲ ಅನೇಕರು ಕಾಂಗ್ರೆಸ್‌ನಲ್ಲಿದ್ದಾರೆ. ಆದರೆ ಅಂಥವರನ್ನು ಅಲ್ಲಿ ಬೆಳೆಯಲು ಬಿಡದಿರುವುದು ವಿಷಾದನೀಯ ಎಂದಿದ್ದಾರೆ.

ADVERTISEMENT

ಗಾಲ್ವನ್‌‌ ಕಣಿವೆ ಬಳಿ ಚೀನಾ ಸೈನಿಕರ ಜಮಾವಣೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತಾಗಿ ರಾಹುಲ್‌ ಗಾಂಧಿ, ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.