ADVERTISEMENT

ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ 

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 21:23 IST
Last Updated 23 ಮಾರ್ಚ್ 2020, 21:23 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ (ಪಿಟಿಐ): ವೆಂಟಿಲೇಟರ್‌ಗಳು, ಮುಖಗವಸುಗಳ ರಫ್ತಿಗೆ ನಿರ್ಬಂಧ ಹೇರುವ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ವಿಳಂಬ ಮಾಡಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

‘ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಯ ಹೊರತಾಗಿಯೂ ಮಾರ್ಚ್‌ 19ರವರೆಗೆ ವೆಂಟಿಲೇಟರ್‌ ಹಾಗೂ ಮುಖಗವಸುಗಳ ರಫ್ತಿಗೆ ಕೇಂದ್ರ ಸರ್ಕಾರ ಏಕೆ ಅವಕಾಶ ನೀಡಿತು. ಭಾರತದಲ್ಲೇ ಇವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವ ಬದಲು ರಫ್ತಿಗೆ ಅವಕಾಶ ನೀಡಿದ್ದು ಯಾರು? ಇದು ಸಂಚು ಅಲ್ಲವೇ?’ ಎಂದು ರಾಹುಲ್‌ ಗಾಂಧಿ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT