ADVERTISEMENT

ಅಧಿಕಾರ ವಿಕೇಂದ್ರೀಕರಣಗೊಳಿಸಿ: ಪ್ರಧಾನಿಗೆ ರಾಹುಲ್‌ ಸಲಹೆ

ನಿರ್ಧಾರ ಕೈಗೊಳ್ಳುವಾಗ ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಲಹೆ

ಪಿಟಿಐ
Published 8 ಮೇ 2020, 20:50 IST
Last Updated 8 ಮೇ 2020, 20:50 IST
   

ನವದೆಹಲಿ: ‘ಕೇವಲ ಪ್ರಧಾನಿ ಕಚೇರಿಯಿಂದ ಮಾತ್ರ ಕೋವಿಡ್‌–19 ನಿಯಂತ್ರಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು’ ಎಂದು ಕಾಂಗ್ರೆಸ್‌ ನಾಯಕ ಮತ್ತು ಸಂಸದ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ.

‘ಅಧಿಕಾರವನ್ನು ವಿಕೇಂದ್ರೀಕರಣಗೊಳಿಸುವುದು ಅಗತ್ಯವಿದೆ. ಕೋವಿಡ್‌–19 ವಿರುದ್ಧದ ಹೋರಾಟವನ್ನು ಕೇಂದ್ರೀಕರಣಗೊಳಿಸಿದರೆ ವಿಪತ್ತು ಸಂಭವಿಸಲಿದೆ. ಪ್ರಧಾನಿ ಅವರು ಮುಖ್ಯಮಂತ್ರಿಗಳ ಮೇಲೆ ಹಾಗೂ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡಬೇಕು’ ಎಂದು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೋವಿಡ್‌–19 ನಿಯಂತ್ರಿಸಲು ಕೇಂದ್ರ ಸರ್ಕಾರ ಸಂಪನ್ಮೂಲಗಳನ್ನು ಒದಗಿಸದ ಕಾರಣ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಕಾಂಗ್ರೆಸ್‌ ಆಡಳಿತದ ರಾಜ್ಯ ಸರ್ಕಾರಗಳು ದೂರು ನೀಡಿದ್ದರಿಂದ ರಾಹುಲ್‌ ಗಾಂಧಿ ಈ ಒತ್ತಾಯ ಮಾಡಿದ್ದಾರೆ.

ADVERTISEMENT

'ಕೊರೊನಾ ವೈರಸ್‌ ನಿಯಂತ್ರಿಸುವ ಕ್ರಮಗಳಲ್ಲಿ ಸರ್ಕಾರ ಪಾರದರ್ಶಕತೆ ಕಾಪಾಡಬೇಕು. ಕೈಗಾರಿಕೆಗಳ ಪುನಶ್ಚೇತನಕ್ಕೆ ಹಣಕಾಸಿನ ಪ್ಯಾಕೇಜ್‌ ಮತ್ತು ಬಡವರಿಗೆ ಹಣಕಾಸಿನ ನೆರವು ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

**

ದೇಶಿಯ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಇನ್ನೂ ಹೆಚ್ಚು ಸಮಯ ವ್ಯರ್ಥ ಮಾಡಿದರೆ ನಮಗೆ ಅಪಾರ ನಷ್ಟವಾಗಲಿದೆ.ಉದ್ಯೋಗದಾತರನ್ನು ರಕ್ಷಿಸುವ ಕಾರ್ಯ ನಡೆಯಬೇಕು.
-ರಾಹುಲ್‌ ಗಾಂಧಿ, ಸಂಸದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.