ADVERTISEMENT

ಲೋಕಸಭೆ ಸೋಲಿನ ಬಳಿಕ ಪಕ್ಷಕ್ಕೆ ಮತ್ತೊಂದು ಇಕ್ಕಟ್ಟು; ನಾಯಕರ ಭೇಟಿಗೆ ರಾಹುಲ್ ನಕಾರ

​ಪ್ರಜಾವಾಣಿ ವಾರ್ತೆ
Published 27 ಮೇ 2019, 20:00 IST
Last Updated 27 ಮೇ 2019, 20:00 IST
   

ನವದೆಹಲಿ: ಲೋಕಸಭೆ ಚುನಾವಣೆ ಸೋಲಿನ ಆಘಾತದ ಬಳಿಕ ಕಾಂಗ್ರೆಸ್‌ ಪಕ್ಷವು ಮತ್ತೊಮ್ಮೆ ಇಕ್ಕಟ್ಟಿಗೆ ಸಿಕ್ಕಿಕೊಂಡಿದೆ. ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೋಲಿನ ಹೊಣೆ ಹೊತ್ತು ಸಲ್ಲಿಸಿರುವ ರಾಜೀನಾಮೆ ಪತ್ರಗಳು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಬರುತ್ತಿವೆ. ಈ ಮಧ್ಯೆ, ಪಕ್ಷದ ಮುಖಂಡರನ್ನು ಭೇಟಿಯಾಗಲು ರಾಹುಲ್‌ ನಿರಾಕರಿಸಿದ್ದಾರೆ.

ಹಿರಿಯ ಮುಖಂಡ ಅಹ್ಮದ್‌ ಪಟೇಲ್‌, ಕಾಂಗ್ರೆಸ್‌ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ರಾಹುಲ್‌ ಭೇಟಿಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಇತರ ಮುಖಂಡರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT