ADVERTISEMENT

ಪ್ರಧಾನಿ ಮೋದಿಯವರ ಕೈಗಳನ್ನು ಕಟ್ಟಿ ಹಾಕಲಾಗಿದೆ: ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 8:25 IST
Last Updated 6 ಆಗಸ್ಟ್ 2025, 8:25 IST
<div class="paragraphs"><p>ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ</p></div>

ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ

   

ಪಿಟಿಐ

ನವದೆಹಲಿ: ಅದಾನಿ ವಿರುದ್ಧ ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ, ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಒಡ್ಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ.

ADVERTISEMENT

ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಲು ಮುಂದಾಗಿರುವುದರಿಂದ ಮುಂದಿನ 24 ಗಂಟೆಯಲ್ಲಿ ಭಾರತದ ಮೇಲೆ ಹೇರಿರುವ ತೆರಿಗೆಯನ್ನು ಗಣನೀಯವಾಗಿ ಏರಿಸಲಾಗುವುದು ಎಂದು ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಭಾರತೀಯರು ದಯವಿಟ್ಟು ಅರ್ಥ ಮಾಡಿಕೊಳ್ಳಿ, ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದಕ್ಕೆ, ಅಮೆರಿಕದಲ್ಲಿ ಅದಾನಿ ವಿರುದ್ಧ ನಡೆಯುತ್ತಿರುವ ತನಿಖೆ’ ಎಂದು ಬರೆದುಕೊಂಡಿದ್ದಾರೆ.

‘ಮೋದಿ, ಎಎ ಹಾಗೂ ರಷ್ಯಾದ ತೈಲ ಒಪ್ಪಂದದ ನಡುವೆ ಇರುವ ಹಣಕಾಸು ಸಂಬಂಧವನ್ನು ಬಹಿರಂಗ ಪಡಿಸುವ ಬೆದರಿಕೆ ಅದರಲ್ಲಿ ಒಂದು. ಮೋದಿಯವರ ಕೈಗಳನ್ನು ಕಟ್ಟಿ ಹಾಕಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಈ ಹೇಳಿಕೆ ಬಗ್ಗೆ ಸರ್ಕಾರದಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.