ADVERTISEMENT

ಅತ್ಯಾಚಾರ ಪ್ರಕರಣ: ಹಾಥರಸ್‌ಗೆ ಭೇಟಿ ನೀಡಲಿರುವ ರಾಹುಲ್, ಪ್ರಿಯಾಂಕಾ

ಪಿಟಿಐ
Published 3 ಅಕ್ಟೋಬರ್ 2020, 6:26 IST
Last Updated 3 ಅಕ್ಟೋಬರ್ 2020, 6:26 IST
ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್‌ ಗಾಂಧಿ
ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್‌ ಗಾಂಧಿ   

ನವದೆಹಲಿ: ಹಾಥರಸ್‌ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿಕಾಂಗ್ರೆಸ್ ಸಂಸದರ ನಿಯೋಗವು ಶನಿವಾರ ಮಧ್ಯಾಹ್ನ ಹಾಥರಸ್‌ಗೆ ತೆರಳಲಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯೂ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿ, ಸಂತಾಪ ವ್ಯಕ್ತಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದ ಹಾಥರಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಬರ್ಬರವಾಗಿ ಅತ್ಯಾಚಾರವೆಸಗಿ, ಹತ್ಯೆಗೈಯಲಾಗಿದೆ. ಈ ದಲಿತ ಯುವತಿಯ ಕುಟುಂಬದವರನ್ನು ಕಾಂಗ್ರೆಸ್‌ ಸಂಸದರ ನಿಯೋಗ ಭೇಟಿ ಮಾಡಲಿದೆ ಎಂದು ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಾಲ್‌ ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಗುರುವಾರಹಾಥರಸ್‌ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ತೆರಳಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಇತರ ನಾಯಕರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ, ದೆಹಲಿಗೆ ವಾಪಾಸು ಕಳುಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.