ADVERTISEMENT

ರಾಹುಲ್‌ ಗಾಂಧಿ, ಅಶೋಕ್‌ ಗೆಹಲೋತ್‌, ಸಚಿನ್‌ ಪೈಲಟ್‌ ಬಿಂದಾಸ್ ಡ್ಯಾನ್ಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2022, 2:53 IST
Last Updated 5 ಡಿಸೆಂಬರ್ 2022, 2:53 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಜೈಪುರ: ಕಾಂಗ್ರೆಸ್‌ ಪಕ್ಷ ಆಡಳಿತವಿರುವರಾಜಸ್ಥಾನಕ್ಕೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಪ್ರವೇಶ ಮಾಡಿದೆ.

ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌, ಸಚಿನ ಪೈಲಟ್‌ ಸೇರಿದಂತೆರಾಜಸ್ಥಾನ ಕಾಂಗ್ರೆಸ್‌ ಘಟಕದ ನಾಯಕರು ರಾಹುಲ್‌ ಗಾಂಧಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

ಭಾನುವಾರ ನಡೆದ ಬುಡಕ್ಕಟು ಜನರೊಂದಿಗಿನ ಕಾರ್ಯಕ್ರಮದಲ್ಲಿ ಅಶೋಕ್‌ ಗೆಹಲೋತ್, ಸಚಿನ್‌ ಪೈಲಟ್‌ ಅವರು ರಾಹುಲ್‌ ಗಾಂಧಿ ಅವರ ಜೊತೆ ವೇದಿಕೆ ಹಂಚಿಕೊಂಡರು. ಈ ವೇಳೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಇದ್ದರು.

ADVERTISEMENT

ರಾಹುಲ್‌ ಗಾಂಧಿ ಅವರ ಕೈಹಿಡಿದುಅಶೋಕ್‌ ಗೆಹಲೋತ್, ಸಚಿನ್‌ ಪೈಲಟ್‌ ಬುಡಕಟ್ಟು ನೃತ್ಯಕ್ಕೆ ಹೆಜ್ಜೆ ಹಾಕಿದ್ದು ವಿಶೇಷವಾಗಿದ್ದು. ಈ ವೇಳೆ ಗೆಹಲೋತ್‌ ಹಾಗೂ ಸಚಿನ್‌ ಪೈಲಟ್‌ ಅವರು ತಮ್ಮ ನಡುವಿನ ವೈಮನಸ್ಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದರು.

ರಾಹುಲ್‌ ಗಾಂಧಿ, ಅಶೋಕ್‌ ಗೆಹಲೋತ್‌, ಸಚಿನ್‌ ಪೈಲಟ್‌ ಒಟ್ಟಿಗೆ ನೃತ್ಯ ಮಾಡಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ 12 ರಾಜ್ಯಗಳಲ್ಲಿ ಒಟ್ಟು 3,750 ಕಿ.ಮೀ. ಕ್ರಮಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರೆ ಮುಕ್ತಾಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.