ADVERTISEMENT

ಅಸ್ಸಾಂ ಮುಖ್ಯಮಂತ್ರಿ ಹಿಮಂತರನ್ನು ಜನ ಜೈಲಿಗೆ ಹಾಕುತ್ತಾರೆ: ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 13:57 IST
Last Updated 16 ಜುಲೈ 2025, 13:57 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮನ್ನು ‘ರಾಜ’ ಎಂದುಕೊಂಡಿದ್ದಾರೆ. ಭ್ರಷ್ಟಾಚಾರ ಆರೋಪದಲ್ಲಿ ಅವರನ್ನು ಅಸ್ಸಾಂ ಜನರು ಜೈಲಿಗೆ ಹಾಕುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು. 

ಚಾಯಗಾಂವ್‌ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಹುಲ್‌ ‘ಶರ್ಮಾ ಹಾಗೂ ಅವರ ಕುಟುಂಬವನ್ನು ಭ್ರಷ್ಟಾಚಾರಕ್ಕೆ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದರು. 

‘ಈಗ ಮುಖ್ಯಮಂತ್ರಿಗೆ ಭಯವಾಗಿದೆ. ನಿರ್ಭೀತ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮನ್ನು ಜೈಲಿಗೆ ಹಾಕುತ್ತಾರೆ ಎಂದು ಅವರಿಗೆ ತಿಳಿದಿದೆ’ ಎಂದರು. 

ADVERTISEMENT

‘ಚುನಾವಣಾ ಆಯೋಗ ಹಾಗೂ ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿವೆ. ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ವಂಚಿಸಿ ಬಿಜೆಪಿಯು ಮಹಾರಾಷ್ಟ್ರ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಬಿಹಾರ ಮತ್ತು ಅಸ್ಸಾಂಗಳಲ್ಲಿ ಇದೇ ತಂತ್ರದ ಮೊರೆ ಹೋಗಲು ಅದು ಪ್ರಯತ್ನಿಸುತ್ತಿದೆ. ಹೀಗಾಗಿ ನಾವು ಜಾಗರೂಕರಾಗಿರಬೇಕು’ ಎಂದು ಆರೋಪಿಸಿದರು. 

‘ಮಾಧ್ಯಮವು ನಮ್ಮ ಸ್ನೇಹಿಯಲ್ಲ. ಅವು ಸತ್ಯವನ್ನು ಬಹಿರಂಗಪಡಿಸುತ್ತಿಲ್ಲ. ಕೇವಲ ಅಂಬಾನಿ, ಅದಾನಿ, ಮುಖ್ಯಮಂತ್ರಿ, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರನ್ನು ತೋರಿಸುತ್ತಿವೆ’ ಎಂದೂ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.