ಬಿಹಾರದಲ್ಲಿ ನಡೆದ ‘ಮತದಾರನ ಅಧಿಕಾರ ಯಾತ್ರೆ’ಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು
–ಪಿಟಿಐ ಚಿತ್ರ
ಪಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಜೀಪ್‌ನ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈಚೆಗೆ ಬಿಹಾರದಲ್ಲಿ ನಡೆದ ‘ಮತದಾರನ ಅಧಿಕಾರ ಯಾತ್ರೆ’ಯ ವೇಳೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಜೀಪ್ ಪೊಲೀಸ್ ಕಾನ್ಸ್ಟೆಬಲ್ಗೆ ಡಿಕ್ಕಿ ಹೊಡೆದಿತ್ತು. ಇದ್ದರಿಂದ ಕಾನ್‌ಸ್ಟೆಬಲ್ ಗಾಯಗೊಂಡಿದ್ದರು.
‘ಘಟನೆ ಸಂಬಂಧ ಜೀಪ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರಗಳನ್ನು ತನಿಖೆ ನಂತರ ತಿಳಿಸಲಾಗುವುದು’ ಎಂದು ನವಾದಾ ಎಸ್‌ಪಿ ಅಭಿನವ್ ಧೀಮನ್ ಹೇಳಿದ್ದಾರೆ.
ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸುವಂತೆ ರಾಹುಲ್ ಗಾಂಧಿ ಬೆಂಬಲಿಗರಿಗೆ ಸೂಚಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಇದೇ ವಿಡಿಯೊವನ್ನು ಹಂಚಿಕೊಂಡಿದ್ದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.