ADVERTISEMENT

ಭಾರತ ಮೇಲೆ ಆರ್ಥಿಕ ಬೆದರಿಕೆ: ಟ್ರಂಪ್ ಸುಂಕ ಹೆಚ್ಚಳಕ್ಕೆ ರಾಹುಲ್‌ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಆಗಸ್ಟ್ 2025, 6:11 IST
Last Updated 7 ಆಗಸ್ಟ್ 2025, 6:11 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಭಾರತದಿಂದ ಆಮದಾಗುವ ಸರಕುಗಳ ಮೇಲೆ ಹೆಚ್ಚುವರಿ ಶೇ 25 ರಷ್ಟು ಸುಂಕ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಖಂಡಿಸಿದ್ದಾರೆ.

ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ಶೇ 50ರಷ್ಟು ಸುಂಕ ವಿಧಿಸುವ ಮೂಲಕ ಟ್ರಂಪ್‌ ಅವರು ಆರ್ಥಿಕ ಬೆದರಿಕೆ ಹಾಕುತ್ತಿದ್ದಾರೆ. ಅನ್ಯಾಯದ ವ್ಯಾಪಾರ ಒಪ್ಪಂದಕ್ಕೆ ಭಾರತವನ್ನು ಬೆದರಿಸುವ ಪ್ರಯತ್ನವಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ಮುಂದುವರಿದು, ‘ಪ್ರಧಾನಿ ಮೋದಿ ತಮ್ಮ ದೌರ್ಬಲ್ಯವು ಭಾರತೀಯ ಜನರ ಹಿತಾಸಕ್ತಿಗಳನ್ನು ಮೀರಿಸಲು ಬಿಡದಿರುವುದು ಉತ್ತಮ’ ಎಂದಿದ್ದಾರೆ.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ನಾಯಕ ಪವನ್ ಖೇರಾ, ಇದು ಅಮೆರಿಕದ ಶುದ್ಧ ಮತ್ತು ಸರಳ ಬೆದರಿಕೆಯ ತಂತ್ರ ಎಂದು ಹೇಳಿದ್ದಾರೆ.

ಈ ಮೊದಲು ಆಗಸ್ಟ್ 01ರಿಂದ ಅನ್ವಯವಾಗುವಂತೆ ಭಾರತದ ಸರಕುಗಳ ಮೇಲೆ ಶೇ 25ರಷ್ಟು ಸುಂಕ ವಿಧಿಸಿದ್ದರು. ಭಾರತವು ರಷ್ಯಾದೊಂದಿಗೆ ತೈಲ ಖರೀದಿಯನ್ನು ಮುಂದುವರಿಸಿದ್ದಕ್ಕೆ ಪ್ರತೀಕಾರವಾಗಿ ಬುಧವಾರ(ಆ.6) ಹೆಚ್ಚುವರಿ ಶೇ 25ರಷ್ಟು ಸುಂಕ ವಿಧಿಸುವ ಮೂಲಕ ಸುಂಕವನ್ನು ಶೇ 50ಕ್ಕೆ ಏರಿಕೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.