ADVERTISEMENT

ವೈಷ್ಣೋದೇವಿ ದರ್ಶನ ಪಡೆಯಲು 14 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2021, 2:27 IST
Last Updated 10 ಸೆಪ್ಟೆಂಬರ್ 2021, 2:27 IST
ವೈಷ್ಣೋದೇವಿ ಗುಹೆಗೆ ಭೇಟಿ ನೀಡಿದ ರಾಹುಲ್‌ ಗಾಂಧಿ
ವೈಷ್ಣೋದೇವಿ ಗುಹೆಗೆ ಭೇಟಿ ನೀಡಿದ ರಾಹುಲ್‌ ಗಾಂಧಿ   

ಶ್ರೀನಗರ: ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿದ್ದಾರೆ.

ಜಮ್ಮುವಿನ ಕಾತ್ರಾದಿಂದ 14 ಕಿ.ಮೀ ದೂರದಲ್ಲಿರುವ ವೈಷ್ಣೋದೇವಿ ಗುಹೆಗೆ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್‌ ಗಾಂಧಿ ಶುಕ್ರವಾರ ದೇವಿಯ ದರ್ಶನ ಪಡೆದಿದ್ದಾರೆ.

ಪ್ರಯಾಣದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಹುಲ್‌, 'ನಾನು ವೈಷ್ಣೋಮಾತೆಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ. ಈ ಸಮಯದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ' ಎಂದು ತಿಳಿಸಿದ್ದಾರೆ.

ADVERTISEMENT

ಯಾತ್ರಾರ್ಥಿಗಳು, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಮತ್ತು ಭದ್ರತಾ ಸಿಬ್ಬಂದಿ ರಾಹುಲ್‌ ಅವರಿಗೆ ಸಾಥ್‌ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.