ರಾಹುಲ್ ಗಾಂಧಿ
– ಪಿಟಿಐ ಚಿತ್ರ
ನವದೆಹಲಿ: ಕಾಂಗ್ರೆಸ್ ಮಾಡಿದ ಬಹಳಷ್ಟು ತಪ್ಪುಗಳು ನಾನು ಪಕ್ಷದಲ್ಲಿ ಇಲ್ಲದಿದ್ದಾಗ ಸಂಭವಿಸಿವೆ, ಪಕ್ಷವು ತನ್ನ ಇತಿಹಾಸದಲ್ಲಿ ಮಾಡಿದ ಎಲ್ಲಾ ತಪ್ಪುಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಾನು ಹೆಚ್ಚು ಸಂತೋಷಪಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
1984ರ ಗಲಭೆಗಳು ಮತ್ತು ಸಿಖ್ ಸಮುದಾಯದೊಂದಿಗಿನ ಕಾಂಗ್ರೆಸ್ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.
80ರ ದಶಕದಲ್ಲಿ ನಡೆದಿದ್ದು ತಪ್ಪು ಎಂದು ನಾನು ಸಾರ್ವಜನಿಕವಾಗಿ ಹೇಳಿದ್ದೇನೆ ಎಂದು ಅವರು ಹೇಳಿದ್ದಾರೆ.
ಏಪ್ರಿಲ್ 21 ರಂದು ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದ ವ್ಯಾಟ್ಸನ್ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್‌ನ್ಯಾಷನಲ್ ಆ್ಯಂಡ್ ಪಬ್ಲಿಕ್ ಅಫೇರ್ಸ್‌ನಲ್ಲಿ ನಡೆದ ಸಂವಾದಲ್ಲಿ ಅವರು ಹೀಗೆ ಹೇಳಿದ್ದಾರೆ. ಸಂವಾದದ ವೀಡಿಯೊವನ್ನು ಶನಿವಾರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಸಿಖ್ ಗಲಭೆಯನ್ನು ಉಲ್ಲೇಖಿಸಿ, ಸಿಖ್ ಸಮುದಾಯದೊಂದಿಗೆ ಸಂಬಂಧ ಪುನಃ ಸ್ಥಾಪಿಸಲು ಯಾವ ಪ್ರಯತ್ನಗಳನ್ನು ಮಾಡುತ್ತಿದ್ದೀರಿ ಎಂದು ಸಿಖ್ ವಿದ್ಯಾರ್ಥಿಯೊಬ್ಬರು ಪ್ರಶ್ನಿಸಿದ್ದಾರೆ.
‘ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲಿ ಮಾಡಿದ ಎಲ್ಲದಕ್ಕೂ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಾನು ಹೆಚ್ಚು ಸಂತೋಷಪಡುತ್ತೇನೆ. 80ರ ದಶಕದಲ್ಲಿ ನಡೆದದ್ದು ತಪ್ಪು ಎಂದು ನಾನು ಸಾರ್ವಜನಿಕವಾಗಿ ಹೇಳಿದ್ದೇನೆ. ನಾನು ಹಲವಾರು ಬಾರಿ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದೇನೆ. ಸಿಖ್ ಸಮುದಾಯದೊಂದಿಗೆ ನನಗೆ ಅತ್ಯಂತ ಉತ್ತಮ ಸಂಬಂಧವಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.