ADVERTISEMENT

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ?

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2019, 17:34 IST
Last Updated 23 ಮಾರ್ಚ್ 2019, 17:34 IST
   

ನವದೆಹಲಿ:‘ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ’ ಎಂದು ಕೇರಳ ಕಾಂಗ್ರೆಸ್ ರಾಹುಲ್ ಗಾಂಧಿ ಅವರನ್ನು ಕೇಳಿಕೊಂಡಿದೆ. ‘ರಾಹುಲ್‌ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಪಕ್ಷದ ಮೂಲಗಳು ಹೇಳಿವೆ.

‘ನಮ್ಮ ಮನವಿಗೆ ರಾಹುಲ್ ಗಾಂಧಿ ಸಮ್ಮತಿಸಿದ್ದಾರೆ’ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹೇಳಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

2009ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ವಯನಾಡ್ ಲೋಕಸಭಾ ಕ್ಷೇತ್ರವು ಅಸ್ತಿತ್ವಕ್ಕೆ ಬಂದಿತ್ತು.ತಮಿಳುನಾಡು ಮತ್ತು ಕರ್ನಾಟಕದ ಜತೆ ಗಡಿ ಹಂಚಿಕೊಂಡಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಾಬಲ್ಯವಿದೆ.

ADVERTISEMENT

2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲಿ ಜಯಗಳಿಸಿದ್ದರು. 2014ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಅಂತರ 1.5 ಲಕ್ಷದಷ್ಟಿತ್ತು. ಹೀಗಾಗಿ ಇದು ಸ್ಪರ್ಧೆಗೆ ಸುರಕ್ಷಿತ ಕ್ಷೇತ್ರ ಎಂದು ಪರಿಗಣಿಸಲಾಗುತ್ತಿದೆ. ರಾಹುಲ್ ಇಲ್ಲಿ ಸ್ಪರ್ಧಿಸಿದರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ಗೆ ನೆರವಾಗಲಿದೆ ಎಂದು ಕೇರಳ ಕಾಂಗ್ರೆಸ್ ಹೇಳಿದೆ. ಆದರೆ ರಾಹುಲ್ ಸಮ್ಮತಿ ನೀಡಿದ್ದಾರೆ ಎಂಬ ವರದಿಯನ್ನು ಪಕ್ಷ ನಿರಾಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.