ADVERTISEMENT

ಪ್ರಧಾನಿ ಮೋದಿ ದೇಶದ ಸಂಪತ್ತನ್ನು ಆಯ್ದ ಕೆಲವರಿಗೆ ವರ್ಗಾಯಿಸುತ್ತಿದ್ದಾರೆ: ರಾಹುಲ್

ಪಿಟಿಐ
Published 20 ಜನವರಿ 2026, 10:56 IST
Last Updated 20 ಜನವರಿ 2026, 10:56 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ</p></div>

ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ

   

ಕೃಪೆ: ಪಿಟಿಐ

ರಾಯ್‌ಬರೇಲಿ: 'ನಾವು ಜನರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದರೆ, ಪ್ರಧಾನಿ ಮೋದಿ ಅವರು ದೇಶದ ಸಂಪತ್ತನ್ನು ಆಯ್ದ ಕೆಲವರಿಗೆ ವರ್ಗಾಯಿಸುತ್ತಿದ್ದಾರೆ' ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ADVERTISEMENT

ರಾಯ್‌ಬರೇಲಿಗೆ ಭೇಟಿ ನೀಡಿ ಕಾರ್ಯಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು, ದೇಶದ ಸಂಪತ್ತು ಉದ್ಯಮಿಗಳಾದ ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರ ಕೈಯಲ್ಲಿ ಕೇಂದ್ರೀಕೃತವಾಗಬೇಕೆಂದು ಪ್ರಧಾನಿ ಬಯಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ಅಧಿಕಾರವನ್ನು ಕೇಂದ್ರಿಕರಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಾಯಿಸುವ ಮೂಲಕ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ರಾಹುಲ್‌ ತಿಳಿಸಿದ್ದಾರೆ.

ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ದುರ್ಬಲಗೊಳಿಸಿ, ಯೋಜನೆಯಲ್ಲಿ ಹಲವು ಬದಲಾವಣೆ ಮಾಡುವ ಮೂಲಕ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕಾರ್ಪೋರೆಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ನೋಡುತ್ತಿದ್ದಾರೆ. ನರೇಗಾ ಯೋಜನೆ ಬದಲಾಯಿಸುವ ಮೂಲಕ ಮಹಾತ್ಮ ಗಾಂಧಿಯನ್ನು ಅವಮಾನಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ರಾಹುಲ್ ಟೀಕಿಸಿದ್ದಾರೆ.

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.