ರಾಹುಲ್ ಗಾಂಧಿ
ಪಿಟಿಐ ಚಿತ್ರ
ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ನಡೆದಿದ್ದ ಚುನಾವಣೆ ರ‍್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ರಾಹುಲ್ ಗಾಂಧಿ ಬುಧವಾರ ಬೆಳಗ್ಗೆ 10.55ಕ್ಕೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಹೈಕೋರ್ಟ್ ನಿರ್ದೇಶನದಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾದರು. ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್ ಗಾಂಧಿಯ ವಕೀಲರು ಹೇಳಿದ್ದಾರೆ.
2018ರ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್ ಗಾಂಧಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರೆಂದು ಆರೋಪಿಸಿ ಪ್ರತಾಪ್ ಕುಮಾರ್ ಎಂಬುವವರು ಪ್ರಕರಣ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.