ADVERTISEMENT

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ವಿಚಾರಣೆ ಜುಲೈ 14ಕ್ಕೆ ಮುಂದೂಡಿಕೆ

ಪಿಟಿಐ
Published 2 ಜುಲೈ 2025, 9:24 IST
Last Updated 2 ಜುಲೈ 2025, 9:24 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ಸುಲ್ತಾನಪುರ: ರಾಹುಲ್‌ ಗಾಂಧಿ ಅವರು ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆನ್ನಲಾದ ಆರೋಪ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ 14ಕ್ಕೆ ಮುಂದೂಡಿದೆ.

ADVERTISEMENT

2018ರಲ್ಲಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ದೂರುದಾರರ ಪರವಾಗಿ ಹಾಜರಾದ ವಕೀಲ ಸಂತೋಶ್ ಕುಮಾರ್ ಪಾಂಡೆ, ಸಾಕ್ಷಿ ವಿಚಾರಣೆಗೆ ಗೈರಾಗಿದ್ದರಿಂದ ವಿಚಾರಣೆ ಮುಂದೂಡಲಾಯಿತು ಎಂದು ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2023ರಲ್ಲಿ ರಾಹುಲ್ ಗಾಂಧಿ ವಿರುದ್ಧ ವಾರಂಟ್ ಹೊರಡಿಸಿತ್ತು. ಬಳಿಕ 2024ರ ಫೆಬ್ರುವರಿಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನಂತರ ತಲಾ ₹25 ಸಾವಿರ ಮೌಲ್ಯದ ಇಬ್ಬರ ಶ್ಯೂರಿಟಿಯ ಮೇಲೆ ಜಾಮೀನು ಪಡೆದಿದ್ದರು.

ಜುಲೈ 26ರಂದು ರಾಹುಲ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು. ತಾವು ನಿರಾಪರಾಧಿ ಎಂದು ಪ್ರತಿಪಾದಿಸಿದ್ದರಲ್ಲದೆ ತಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ಹೇಳಿದ್ದರು.

2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಮಿಶ್ರಾ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.