ನವದೆಹಲಿ: ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಪಂಜಾಬ್‌ಗೆ ಕೇಂದ್ರ ಸರ್ಕಾರ ತಕ್ಷಣವೇ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ತಾವು ನೀಡಿರುವ ಭೇಟಿಗೆ ಸಂಬಂಧಿಸಿದ 10 ನಿಮಿಷಗಳ ವಿಡಿಯೊವನ್ನು ಅವರು ಸೋಮವಾರ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.
‘ಪ್ರವಾಹದಿಂದಾಗಿ ಪಂಜಾಬ್‌ನಲ್ಲಿ ಸುಮಾರು ₹20,000 ಕೋಟಿ ನಷ್ಟ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರಧಾನಿ ಘೋಷಿಸಿದ ₹1,600 ಕೋಟಿ ಆರಂಭಿಕ ಪರಿಹಾರ ಪ್ಯಾಕೇಜ್ ಪಂಜಾಬ್ ಜನರಿಗೆ ಮಾಡಿರುವ ಅನ್ಯಾಯ’ ಎಂದು ಹೇಳಿದ್ದಾರೆ.
ರಾಹುಲ್ ಅವರು ಕಳೆದ ಸೋಮವಾರ ಅಮೃತಸರ ಮತ್ತು ಗುರುದಾಸಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.