ADVERTISEMENT

ನೋಟು ರದ್ದತಿಗಿಂತಲೂ ಎನ್‌ಆರ್‌ಸಿ ಹಾನಿಕಾರಕ: ರಾಹುಲ್‌ ಗಾಂಧಿ ಕಿಡಿ

ಪಿಟಿಐ
Published 28 ಡಿಸೆಂಬರ್ 2019, 19:27 IST
Last Updated 28 ಡಿಸೆಂಬರ್ 2019, 19:27 IST
ಚಿತ್ರ: ಪ್ರಕಾಶ್‌ ಶೆಟ್ಟಿ
ಚಿತ್ರ: ಪ್ರಕಾಶ್‌ ಶೆಟ್ಟಿ   

ನವದೆಹಲಿ: ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ಕುರಿತುಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ‘ನೋಟು ರದ್ಧತಿಗಿಂತಲೂ ಎನ್‌ಆರ್‌ಸಿ ಹೆಚ್ಚು ಅಪಾಯಕಾರಿ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ 134ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ನೋಟು ರದ್ಧತಿಗಿಂತಲೂ ದುಪ್ಪಟ್ಟು ಅಪಾಯಕಾರಿ ಪರಿಣಾಮವನ್ನು ಎನ್‌ಆರ್‌ಸಿ ಬೀರಲಿದೆ. ಎಲ್ಲಾ ಬಡವರು ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ಅವರು ಹೆಚ್ಚು ತೊಂದರೆಗೀಡಾಗಬೇಕಾಗುತ್ತದೆ’ ಎಂದರು.

‘ಹಿಂಸಾಚಾರದ ಭೀತಿ’
ಗುವಾಹಟಿ (ಅಸ್ಸಾಂ):
ಬಿಜೆಪಿ ಆಡಳಿತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಯಿಂದಾಗಿ ಅಸ್ಸಾಂ ಹಿಂಸಾಚಾರದ ಹಾದಿಗೆ ಮರಳಬಹುದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದರು.

ADVERTISEMENT

ಗುವಾಹಟಿಯಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳ ಸಂಸ್ಕೃತಿ, ಭಾಷೆ ಮತ್ತು ಅಸ್ಮಿತೆಯ ಮೇಲೆ ದಾಳಿ ಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ
ಅವಕಾಶ ನೀಡಬಾರದು’ ಎಂದು ಹೇಳಿದರು.

‘ಪಾಕಿಸ್ತಾನಕ್ಕೆ ಹೋಗಿ’ ಎಂದ ಪೊಲೀಸ್!
ಮೀರಠ್‌:
ಕಳೆದ ವಾರ ಮೀರಠ್‌ನಲ್ಲಿ ಸಿಎಎ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಖಿಲೇಶ್ ನಾರಾಯಣ್‌ ಸಿಂಗ್ ಪ್ರತಿಭಟನಕಾರರಿಗೆ ‘ಪಾಕಿಸ್ತಾನಕ್ಕೆ ಹೋಗಿ’ ಎಂದು ಹೇಳಿದ ವಿಡಿಯೊವೊಂದು ವೈರಲ್ ಆಗಿದೆ.

ಈ ಘಟನೆ ಡಿ. 20ರಂದು ಲಿಸಾರಿ ಗೇಟ್ ಪೊಲೀಸ್‌ಠಾಣೆ ಪ್ರದೇಶದಲ್ಲಿ ನಡೆದಿದ್ದು, ಅಪರಿಚಿತರೊಬ್ಬರು ತಮ್ಮ ಮೊಬೈಲ್‌ನಲ್ಲಿ ಈ ಘಟನೆಯನ್ನು ಸೆರೆ ಹಿಡಿದ್ದಾರೆ. ಈ ವಿಡಿಯೊ ಈಗ ಎಲ್ಲೆಡೆ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.