ADVERTISEMENT

Narendra Modi Birthday: ಪ್ರಧಾನಿ ಮೋದಿಗೆ ಶುಭ ಹಾರೈಸಿದ ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಸೆಪ್ಟೆಂಬರ್ 2021, 7:12 IST
Last Updated 17 ಸೆಪ್ಟೆಂಬರ್ 2021, 7:12 IST
ರಾಹುಲ್ ಗಾಂಧಿ ಹಾಗೂ ನರೇಂದ್ರ ಮೋದಿ
ರಾಹುಲ್ ಗಾಂಧಿ ಹಾಗೂ ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, 'ಮೋದಿ ಅವರೇ, ಹುಟ್ಟುಹಬ್ಬದ ಶುಭಾಶಯಗಳು' ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸದಾ ಟೀಕೆಮಾಡುತ್ತಿರುವ ರಾಹುಲ್ ಗಾಂಧಿ, ಶುಭ ಕೋರಿರುವುದು ರಾಜಕೀಯ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ, ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದಾರೆ. ಅಲ್ಲದೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.