ಹಿಮಾಂತ ಬಿಸ್ವ ಶರ್ಮಾ
ಗುವಾಹಟಿ: ಭ್ರಷ್ಟಾಚಾರ ಮಾಡಿದ್ದಕ್ಕೆ ತಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದು, ನನಗಿಂತ ಮೊದಲು ಅವರು ಜೈಲಿಗೆ ಹೋಗುವುದಿಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದ್ದಾರೆ.
ಇಂಥ ಹೇಳಿಕೆಗಳು ರಾಷ್ಟ್ರೀಯ ನಾಯಕರಿಗೆ ಸೂಕ್ತವಲ್ಲ ಎಂದು ಶರ್ಮಾ ಕುಟುಕಿದ್ದಾರೆ.
ಬುಧವಾರ ಗುವಾಹಟಿ ಸಮೀಪದ ಚಂಗ್ಯೋನ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನಯ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಭ್ರಷ್ಟಾಚಾರಕ್ಕೆ ಹಿಮಂತ ಹಾಗೂ ಅವರ ಕುಟುಂಬಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು. ಜನರೇ ಶರ್ಮಾ ಅವರನ್ನು ಜೈಲಿಗೆ ಹಾಕಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರು.
‘ರಾಜ್ಯವೊಂದಕ್ಕೆ ಬಂದು ಯಾರನ್ನು ಜೈಲಿಗೆ ಹಾಕಬೇಕು ಎಂದು ಹೇಳುವುದು ರಾಷ್ಟ್ರೀಯ ನಾಯಕನಿಗೆ ಶೋಭೆಯಲ್ಲ. ನಾನು ಎಷ್ಟು ಮುಖ್ಯ ಎಂಬುದನ್ನು ಇದು ಸಾರುತ್ತದೆ ಎಂದು ಅವರು ಹೇಳಿದ್ದಾರೆ.
ಚಾಂಗ್ಯೋನ್‌ನಲ್ಲಿ ಪಕ್ಷದ ರಾಜ್ಯ ನಾಯಕರೊಂದಿಗೆ ನಡೆಸಿದ ಗೋಪ್ಯ ಸಭೆಯಲ್ಲಿ ರಾಹುಲ್ ಗಾಂಧಿ ಹೀಗೆ ಹೇಳಿದ್ದಾರೆ ಎಂದು, ಹಿಮಾಂತ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಹಿಮಾಂತ ಹೇಳಿಕೆ ಬಳಿಕ ರಾಹುಲ್ ಗಾಂಧಿ ಸಾರ್ವಜನಿಕವಾಗಿ ಈ ಮಾತುಗಳನ್ನು ಆಡಿದ್ದರು.
‘ಬರೆದಿಟ್ಟುಕೊಳ್ಳಿ, ಹಿಮಾಂತ ಬಿಸ್ವ ಶರ್ಮಾ ಅವರನ್ನು ಖಂಡಿತವಾಗಿಯೂ ಜೈಲಿಗೆ ಕಳುಹಿಸಲಾಗುವುದು’ ಗೋಪ್ಯ ಸಭೆಯಲ್ಲಿ ರಾಹುಲ್ ಗಾಂಧಿ ಆಡಿತ ಮಾತುಗಳಿವು ಎಂದು ಅವರು ಬರೆದುಕೊಂಡಿದ್ದರು.
ತಮ್ಮ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ ಎನ್ನುವುದನ್ನು ರಾಹುಲ್ ಗಾಂಧಿ ಮನಃಪೂರ್ವಕವಾಗಿ ಮರೆತಂತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.