ADVERTISEMENT

ಭಾರತವು ಶ್ರೀಲಂಕಾದಂತೆಯೇ ಭಾಸವಾಗುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 18 ಮೇ 2022, 12:28 IST
Last Updated 18 ಮೇ 2022, 12:28 IST
   

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ತೈಲ ಬೆಲೆ, ನಿರುದ್ಯೋಗ ಹಾಗೂ ಕೋಮು ಹಿಂಸಾಚಾರದ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಟ್ವೀಟ್‌ ಮಾಡಿದ್ದಾರೆ.

ಭಾರತ ಹಾಗೂ ಶ್ರೀಲಂಕಾದ ಪರಿಸ್ಥಿತಿಯನ್ನು ತುಲನೆ ಮಾಡುವ ರೇಖಾ ನಕ್ಷೆಯನ್ನು ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ತೈಲ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ತುಲನಾತ್ಮಕ ಮಾಹಿತಿ ಇದೆ.

ಭಾರತವನ್ನು ಶ್ರೀಲಂಕಾಗೆ ಹೋಲಿಸಿರುವ ರಾಹುಲ್‌, ‘ಜನರನ್ನು ವಿಚಲಿತಗೊಳಿಸುವುದರಿಂದ ಸತ್ಯಗಳು ಬದಲಾಗುವುದಿಲ್ಲ. ಭಾರತವು ಶ್ರೀಲಂಕಾದಂತೆಯೇ ಭಾಸವಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇತ್ತೀಚಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ, ಮಹಿಂದಾ ರಾಜಪಕ್ಸ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.