ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಮಸೂದೆಯನ್ನು ಮಂಡಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಕಾಂಗ್ರೆಸ್‌ನ ಸಂಸದೀಯ ಕಾರ್ಯತಂತ್ರದ ತಂಡದ ಸಭೆಯ ಬೆನ್ನಲ್ಲೇ ಈ ಪತ್ರವನ್ನು ಕಳುಹಿಸಲಾಗಿದೆ. ಪಹಲ್ಗಾಮ್‌ನಲ್ಲಿ ಗುಪ್ತಚರ ವೈಫಲ್ಯ, ಮಣಿಪುರದ ಪರಿಸ್ಥಿತಿ ಮುಂತಾದ ಸಮಸ್ಯೆಗಳ ಜೊತೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಕೇಂದ್ರದ ಮುಂದೆ ಪ್ರಸ್ತಾಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
‘ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಕಳೆದ ಐದು ವರ್ಷಗಳಿಂದ ಅಲ್ಲಿನ ಜನರು ಹೋರಾಡುತ್ತಿದ್ದಾರೆ. ಇದು ನ್ಯಾಯಸಮ್ಮತವಾದ ಬೇಡಿಕೆಯಾಗಿದೆ. ಅಲ್ಲದೇ ಇದು ಅವರ ಸಾಂವಿಧಾನಿಕ ಹಕ್ಕಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಸರ್ಕಾರದ ಬದ್ಥತೆ ಬಗ್ಗೆ ಪ್ರಧಾನಿ ಮೋದಿ ಅವರು ಹಲವು ಸಂದರ್ಭಗಳಲ್ಲಿ ಮಾತನಾಡಿರುವ ಬಗ್ಗೆಯೂ ಇಲ್ಲಿ ಪ್ರಸ್ತಾಪಿಸಲಾಗಿದೆ.
ಇದೇ ವೇಳೆ, ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸುವಂತೆಯೂ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.