ADVERTISEMENT

ಮೇ 24ರಂದು ಪೂಂಚ್‌ಗೆ ರಾಹುಲ್‌ ಗಾಂಧಿ ಭೇಟಿ ಸಾಧ್ಯತೆ

ಪಿಟಿಐ
Published 22 ಮೇ 2025, 14:09 IST
Last Updated 22 ಮೇ 2025, 14:09 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಮ್ಮುವಿನ ಪೂಂಚ್‌ಗೆ ಶನಿವಾರ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ, ರಾಹುಲ್ ಗಾಂಧಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ.

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಮೇ 7 ರಂದು ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕರ 9 ನೆಲೆಗಳ ಮೇಲೆ ದಾಳಿ ನಡೆಸಿತ್ತು. ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿತ್ತು. ಈ ವೇಳೆ ಪೂಂಚ್ ವಲಯವು ಭಾರಿ ಶೆಲ್‌ ದಾಳಿಗೆ ಸಾಕ್ಷಿಯಾಗಿತ್ತು.

ADVERTISEMENT

ಮೇ 8 ಮತ್ತು 10 ರ ನಡುವೆ, ಜಮ್ಮು ಪ್ರದೇಶದಲ್ಲಿ, ಮುಖ್ಯವಾಗಿ ಪೂಂಚ್‌ನಲ್ಲಿ ಪಾಕಿಸ್ತಾನ ನಡೆಸಿದ ಶೆಲ್, ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ 27 ಜನ ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.