ADVERTISEMENT

ಲೋಕಸಭೆಯಲ್ಲಿ ಮಾತನಾಡುವುದು ನನ್ನ ಹಕ್ಕು, ಅವಕಾಶವನ್ನೇ ನೀಡುತ್ತಿಲ್ಲ: ರಾಹುಲ್

ಪಿಟಿಐ
Published 21 ಜುಲೈ 2025, 11:22 IST
Last Updated 21 ಜುಲೈ 2025, 11:22 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಪಿಟಿಐ ಚಿತ್ರ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ, ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ADVERTISEMENT

ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದೆ. ವಿರೋಧಪಕ್ಷಗಳ ಪ್ರತಿಭಟನೆಯಿಂದಾಗಿ ಮೊದಲ ದಿನವೇ ಎರಡನೇ ಬಾರಿ ಕಲಾಪ ಮುಂದೂಡಿಕೆಯಾದ  ನಂತರ ರಾಹುಲ್‌ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನಾ ಪಡೆಗಳು ನಡೆಸಿದ 'ಆಪರೇಷನ್‌ ಸಿಂಧೂರ' ಹಾಗೂ ನಂತರದ ಬೆಳವಣಿಗೆಗಳ ಕುರಿತು ಚರ್ಚೆಯಾಗಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದವು. ಇದರಿಂದ ಗದ್ದಲ ಉಂಟಾದ ಕಾರಣ ಕಲಾಪವನ್ನು ಮುಂದೂಡಲಾಯಿತು.

ಬಳಿಕ ಮಾತನಾಡಿರುವ ರಾಹುಲ್‌, 'ರಕ್ಷಣಾ ಸಚಿವ ಹಾಗೂ ಬಿಜೆಪಿಯವರಿಗೆ ಮಾತನಾಡಲು ಅವಕಾಶ ನೀಡಲಾಯಿತು. ಆದರೆ, ವಿರೋಧ ಪಕ್ಷಗಳ ನಾಯಕರು ಏನಾದರು ಹೇಳಲು ಮುಂದಾದರೆ, ಅವಕಾಶ ನಿರಾಕರಿಸಲಾಯಿತು' ಎಂದು ಟೀಕಿಸಿದ್ದಾರೆ.

'ನಾನು ವಿರೋಧಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ, ಅವಕಾಶವನ್ನೇ ನೀಡಲಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಗುಡುಗಿದ ರಾಹುಲ್‌, 'ಅವರು (ಪ್ರಧಾನಿ) ಕೆಲವೇ ಕ್ಷಣಗಳಲ್ಲಿ ಸದನದಿಂದ ಓಡಿಹೋದರು' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.