ADVERTISEMENT

ಸಂಸತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್ ಮಾಡಿದ ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2025, 9:11 IST
Last Updated 4 ಡಿಸೆಂಬರ್ 2025, 9:11 IST
<div class="paragraphs"><p>ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ</p></div>

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ

   

ನವದೆಹಲಿ: ಸಂಸತ್ತಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭುಜಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಸಾಜ್ ಮಾಡುತ್ತಿರುವ ದೃಶ್ಯವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಈಗಾಗಲೇ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ADVERTISEMENT

ಮಂಗಳವಾರದಂದು ದೇಶದ ಪ್ರಥಮ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದ ವೇಳೆ ಈ ದೃಶ್ಯ ಕಂಡುಬಂತು.

ಕುರ್ಚಿಯಲ್ಲಿ ಆಸೀನರಾಗಿರುವ ಖರ್ಗೆ ಅವರಿಗೆ ಹಿಂಬದಿಯಿಂದ ರಾಹುಲ್ ಮಸಾಜ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಕದಲ್ಲೇ ಇದ್ದರು.

ಕಾಂಗ್ರೆಸ್‌ನ ಮೂವರು ನಾಯಕರು ಪರಸ್ಪರ ನಗೆ ಚಟಾಕಿ ಹಾರಿಸುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ.

ಪ್ರಸ್ತುತ ವಿಡಿಯೊವನ್ನು ಸುದ್ದಿಸಂಸ್ಥೆ 'ಎಎನ್‌ಐ' ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.