ADVERTISEMENT

ನಿವೃತ್ತ ಸಿಎಪಿಎಫ್‌ ಯೋಧರ ಭೇಟಿ ಮಾಡಿದ ರಾಹುಲ್ ಗಾಂಧಿ

ಪಿಟಿಐ
Published 26 ಮಾರ್ಚ್ 2025, 11:20 IST
Last Updated 26 ಮಾರ್ಚ್ 2025, 11:20 IST
   

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಿವೃತ್ತ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್‌) ಯೋಧರ ನಿಯೋಗವನ್ನು ಭೇಟಿ ಮಾಡಿ, ಸಮಸ್ಯೆ ಆಲಿಸಿದ್ದಾರೆ.

ಈ ಬಗ್ಗೆ ತಮ್ಮ ವಾಟ್ಸಪ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ರಾಹುಲ್‌, ಅವರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ’ ಎಂದಿದ್ದಾರೆ.

‘ಸುದೀರ್ಘ ಚರ್ಚೆಯಲ್ಲಿ ಅವರು ಪಡೆಯುತ್ತಿರುವ ಕಲ್ಯಾಣ ಯೋಜನೆಗಳು ಮತ್ತು ನಿವೃತ್ತಿ ಪ್ರಯೋಜಗಳು ಅವರ ಸೇವೆಗೆ ಅನುಗುಣವಾಗಿ ಸಮರ್ಪಕವಾಗಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಹುತಾತ್ಮ ಯೋಧರ ವಿಷಯದಲ್ಲಿ ನಡೆಯುತ್ತಿರುವ ತಾರತಮ್ಯದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

‘ದೇಶದ ಭದ್ರತೆಗಾಗಿ ಕೆಲಸ ಮಾಡುವ ಪ್ರತಿಯೊಬ್ಬ ಯೋಧನು ದೇಶದ ಹೆಮ್ಮೆ. ಅವರಿಗೆ ನೀಡುವ ಗೌರವ ಮತ್ತು ಸೌಲಭ್ಯಗಳಲ್ಲಿ ತಾರತಮ್ಯ ನಡೆಸುವುದು ಸಂಪೂರ್ಣ ಸ್ವೀಕಾರರ್ಹವಲ್ಲ. ಎಲ್ಲ ಪಡೆಗಳ ಹುತಾತ್ಮರನ್ನು ಸಮಾನವಾಗಿ ಕಾಣಬೇಕು ಮತ್ತು ಎಲ್ಲ ಕುಟುಂಬಗಳಿಗೆ ಸಮಾನವಾದ ಪ್ರಯೋಜನಗಳು ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್‌), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಸಶಸ್ತ್ರ ಸೀಮಾ ಬಲ (SSB) ಮತ್ತು ನ್ಯಾಷನಲ್ ಸೆಕ್ಯುರಿಟಿ ಗಾರ್ಡ್ (NSG) ಯನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.