
ನವದೆಹಲಿ: ನರೇಗಾ ಹೆಸರು ಬದಲಾವಣೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಯ ಉದ್ದೇಶವನ್ನೇ ನಾಶ ಮಾಡುತ್ತಿದ್ದಾರೆ. ಅಧಿಕಾರವು ಕೆಲವೇ ಜನರ ಕೈಯಲ್ಲಿದೆ. ಆ ಮೂಲಕ ದೇಶವನ್ನು ಮಹಾರಾಜರ ಕಾಲಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಕಾರ್ಮಿಕರ ವೇತನ ಹಾಗೂ ಪಂಚಾಯತ್‌ಗಳ ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ವವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರು ಕೂಲಿ ಕಾರ್ಮಿಕರೊಂದಿಗೆ ಮಾತನಾಡಿರುವ ವಿಡಿಯೊ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನರೇಗಾ ಕುರಿತು ಮಾತುಕತೆ ನಡೆಸಿದ್ದಾರೆ.
ಮೋದಿ ಸರ್ಕಾರವು ನಮ್ಮನ್ನು ಗುಲಾಮರನ್ನಾಗಿ ಮಾಡುತ್ತಿದೆ ಹಾಗೂ ನರೇಗಾ ಹೆಸರು ಬದಲಾವಣೆ ಮಾಡುವ ಮೂಲಕ ತಮ್ಮ ಹಕ್ಕುಗಳನ್ನು ಕಳಿದುಕೊಳ್ಳಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.
ಯುಪಿಎ ಅವಧಿಯಲ್ಲಿ ಜಾರಿಯಾಗಿದ್ದ ಎಮ್–ನರೇಗಾ ಯೋಜನೆಯನ್ನು ಮುಂದುವರೆಸುವಂತೆ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಜ.10ರಿಂದ 45 ದಿನಗಳ ಕಾಲ ದೇಶದಾದ್ಯಂತ ‘ನರೇಗಾ ಉಳಿಸಿ’ ಅಭಿಯಾನವನ್ನು ಹಮ್ಮಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.