ADVERTISEMENT

ನರೇಂದ್ರ ಮೋದಿಗೆ ಡೊನಾಲ್ಡ್ ಟ್ರಂಪ್ ಬಗ್ಗೆ ಭಯ: ರಾಹುಲ್ ಗಾಂಧಿ ಟೀಕೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 8:17 IST
Last Updated 16 ಅಕ್ಟೋಬರ್ 2025, 8:17 IST
ರಾಹುಲ್ ಗಾಂಧಿ 
ರಾಹುಲ್ ಗಾಂಧಿ    

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೆದರಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ ಎಂದು ಟ್ರಂಪ್ ಹೇಳಿಕೆಯನ್ನು ಉಲ್ಲೇಖಿಸಿ ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಭಾರತ ರಷ್ಯಾದಿಂದ ತೈಲ ಖರೀದಿ ಮಾಡುವ ಬಗ್ಗೆ ಟ್ರಂಪ್ ಅವರೇ ನಿರ್ಧಾರ ತೆಗೆದುಕೊಂಡು ಘೋಷಣೆ ಮಾಡಲು ಪ್ರಧಾನಿ ಮೋದಿ ಅವಕಾಶ ನೀಡಿದ್ದಾರೆ. ಪದೇ ಪದೇ ಮುಖಭಂಗ ಮಾಡಿದರೂ ಕೂಡ ಅಭಿನಂದನೆ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದಾರೆ ಎಂದು ಬರೆದುಕೊಂಡಿದ್ದಾರೆ.

ADVERTISEMENT

ವಿತ್ತ ಸಚಿವರ ಅಮೆರಿಕ ಭೇಟಿಯನ್ನು ರದ್ದುಗೊಳಿಸಲಾಯಿತು. ಶರ್ಮ್ ಅಲ್-ಶೇಖ್ ಭೇಟಿ ರದ್ದು ಮಾಡಿದರು. ಆಪರೇಷನ್ ಸಿಂಧೂರ ಬಗ್ಗೆ ಟ್ರಂಪ್ ಹೇಳಿಕೆಯನ್ನೂ ಖಂಡಿಸಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.