ADVERTISEMENT

ಪಿತ್ರೋಡಾ ಹೇಳಿಕೆ ಕುರಿತು ರಾಹುಲ್ ಗಾಂಧಿ ಕ್ಷಮೆ ಕೇಳಬೇಕು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2019, 10:15 IST
Last Updated 23 ಮಾರ್ಚ್ 2019, 10:15 IST
ಅಮಿತ್ ಶಾ
ಅಮಿತ್ ಶಾ   

ನವದೆಹಲಿ: ಬಾಲಕೋಟ್ ಮೇಲೆ ವಾಯುಸೇನೆ ನಡೆಸಿದ ದಾಳಿ ಕುರಿತು ಸಂಶಯ ವ್ಯಕ್ತಪಡಿಸಿರುವ ಸ್ಯಾಂ ಪಿತ್ರೋಡಾ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒತ್ತಾಯಿಸಿದ್ದಾರೆ.

ಸ್ಯಾಂ ಪಿತ್ರೋಡಾ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅಮಿತ್ ಶಾ, ಕೂಡಲೆ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು. ಅಲ್ಲದೆ, ಪುಲ್ವಾಮಾ ಘಟನೆ ಮಹಾ ದುರಂತ. ಯಾವ ಕಾಲಕ್ಕೂ ಈ ಘಟನೆಯನ್ನು ಅರಗಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಪಿತ್ರೋಡಾ ಯಾರನ್ನು ಬೆಂಬಲಿಸುತ್ತಾರೆ ಎಂಬುದನ್ನು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು. ರಾಹುಲ್ ಗಾಂಧಿ ಕೂಡ ಯಾರನ್ನು ಬೆಂಬಲಿಸುತ್ತಾರೆ ಎಂಬುದನ್ನು ಹೇಳಬೇಕು. ಯಾವುದೇ ರಾಜಕೀಯ ಪಕ್ಷದ ಅಧ್ಯಕ್ಷರಾಗಲಿ ಭಾರತೀಯ ವಾಯುಸೇನೆಯನ್ನು ಸಂಶಯದಿಂದ ನೋಡಬಾರದು ಎಂದು ಶಾ ತಿರುಗೇಟು ನೀಡಿದ್ದಾರೆ.

ಸ್ಯಾಂ ಪಿತ್ರೋಡಾಕಾಂಗ್ರೆಸ್‌ನ ಸಾಗರೋತ್ತರ ಘಟಕದ ಮುಖ್ಯಸ್ಥ ಹಾಗೂ ರಾಹುಲ್‌ ಗಾಂಧಿ ಅವರ ಆಪ್ತರಾಗಿದ್ದಾರೆ. ಅಲ್ಲದೆ, 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ಸಮಿತಿಯ ಸದಸ್ಯರೂ ಆಗಿರುವ ಪಿತ್ರೋಡಾ, ಬಾಲಕೋಟ್ ವೈಮಾನಿಕ ದಾಳಿ ಕುರಿತು ಸಂಶಯವ್ಯಕ್ತಪಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.