ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿರುವ ವಿಷಯವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತು ಅವರು, ‘ಕಾರ್ಯಕ್ರಮ ಮುಗಿಯಿತು’ ಎಂಬುದಾಗಿ ಭಾನುವಾರ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ.
ಕಳೆದ 10 ದಿನಗಳ ಅವಧಿಯಲ್ಲಿ ಕೋವಿಡ್ ಲಸಿಕೆ ನೀಡಿರುವುದಕ್ಕೆ ಸಂಬಂಧಿಸಿ ಕೋವಿನ್ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಗ್ರಾಫ್‌ವೊಂದನ್ನು ಅವರು ಈ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
‘ದಾಖಲೆ ಪ್ರಮಾಣದಲ್ಲಿ ಲಸಿಕೆ ನೀಡಿದ ನಂತರ, ಲಸಿಕೆ ನೀಡುವಲ್ಲಿ ಮತ್ತೆ ಇಳಿಕೆ ಕಂಡು ಬಂದಿದೆ’ ಎಂದೂ ಅವರು ಹೇಳಿದ್ದಾರೆ.
‘ಒಂದೇ ದಿನ 2.1 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆ ನೀಡಲಾಗಿದೆ. ದೇಶಕ್ಕೆ ಇಂತಹ ಹೆಚ್ಚು ಕಾರ್ಯಕ್ರಮಗಳ ಅಗತ್ಯವಿದೆ’ ಎಂದು ಅವರು ಶನಿವಾರವೂ ಟ್ವೀಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.