ADVERTISEMENT

ಖರ್ಗೆ,ಲಾಲುಗೆ ಕುಡಿಯಲು ನೀರು ಕೊಟ್ಟ ರಾಹುಲ್: ಸಜ್ಜನಿಕೆಯ ವರ್ತನೆ ಎಂದ ನೆಟ್ಟಿಗರು

ಪಿಟಿಐ
Published 17 ಆಗಸ್ಟ್ 2025, 13:06 IST
Last Updated 17 ಆಗಸ್ಟ್ 2025, 13:06 IST
<div class="paragraphs"><p>ರಾಹುಲ್‌ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ, ಲಾಲು ಪ್ರಸಾದ್ ಅವರಿಗೆ ಕುಡಿಯಲು ನೀರು ಕೊಡುತ್ತಿರುವ ದೃಶ್ಯ</p></div>

ರಾಹುಲ್‌ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ, ಲಾಲು ಪ್ರಸಾದ್ ಅವರಿಗೆ ಕುಡಿಯಲು ನೀರು ಕೊಡುತ್ತಿರುವ ದೃಶ್ಯ

   

–ಪಿಟಿಐ ಚಿತ್ರ

ಸಸಾರಾಮ್ (ಬಿಹಾರ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಬಿಹಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಕುಡಿಯಲು ನೀರು ಕೊಡುವ ಮೂಲಕ ಗಮನ ಸೆಳೆದಿದ್ದಾರೆ.

ADVERTISEMENT

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ಮತ ಕಳ್ಳತನ ವಿರೋಧಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಇಂದು (ಭಾನುವಾರ)‌ ‘ಮತದಾರನ ಅಧಿಕಾರ (ಮತದಾರರ ಹಕ್ಕು) ಯಾತ್ರೆ’ಯನ್ನು ಆರಂಭಿಸಿದ್ದಾರೆ.

‘ಮತದಾರರ ಅಧಿಕಾರ ಯಾತ್ರೆ’ಯು ಬಿಹಾರದ ಸಸಾರಾಮ್​ನಿಂದ ಆರಂಭಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ತೇಜಸ್ವಿ ಯಾದವ್ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಹಲವು ನಾಯಕರು ಯಾತ್ರೆಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ವೇದಿಕೆಯಲ್ಲಿದ್ದ ಖರ್ಗೆ, ಲಾಲು ಪ್ರಸಾದ್ ಅವರಿಗೆ ಸ್ವತಃ ರಾಹುಲ್‌ ಗಾಂಧಿ ಅವರು ಕುಡಿಯಲು ನೀರು ಕೊಟ್ಟಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಹುಲ್‌ ‘ಸಜ್ಜನಿಕೆಯ ವರ್ತನೆ’ಯಿಂದಾಗಿ ನೆಟ್ಟಿಗರಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದಾರೆ.

‘ಮತದಾರರ ಅಧಿಕಾರ ಯಾತ್ರೆ’ಯು ಬಿಹಾರದಾದ್ಯಂತ 16 ದಿನಗಳು ನಡೆಯಲಿದೆ. 1,300 ಕಿ.ಮೀ ಸಾಗಲಿರುವ ಈ ಯಾತ್ರೆಯು ಸೆಪ್ಟೆಂಬರ್‌ 1ರಂದು ಪಟ್ನಾದಲ್ಲಿ ಸಮಾರೋಪಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.