ADVERTISEMENT

ಮನಮೋಹನ್‌ ಸಿಂಗ್ ಜನ್ಮದಿನ: ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಸೆಪ್ಟೆಂಬರ್ 2020, 7:22 IST
Last Updated 26 ಸೆಪ್ಟೆಂಬರ್ 2020, 7:22 IST
ಡಾ.ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ)
ಡಾ.ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ)   

ನವದೆಹಲಿ: ಮಾಜಿ ಪ್ರಧಾನಿ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮನಮೋಹನ್ ಸಿಂಗ್ ಅವರ 88ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ.

‘ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ಅವರಿಗೆ ಆಯಸ್ಸು, ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಮನಮೋಹನ್ ಸಿಂಗ್ ಅವರಂತಹ ಆಳವಾದ ಜ್ಞಾನವುಳ್ಳ ಪ್ರಧಾನಿಯ ಕೊರತೆ ಇಂದು ಭಾರತದಲ್ಲಿ ಎದ್ದು ಕಾಣುತ್ತಿದೆ. ಅವರ ಪ್ರಮಾಣಿಕತೆ, ಸಭ್ಯತೆ ಮತ್ತು ಸಮರ್ಪಣಾ ಮನೋಭಾವ ನಮಗೆಲ್ಲ ಸ್ಫೂರ್ತಿಯ ಮೂಲ. ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಿಂದಲೂ ಸಿಂಗ್ ಅವರಿಗೆ ಶುಭ ಹಾರೈಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.