ADVERTISEMENT

ಉದ್ಯೋಗ ಕೇಳಿದವರಿಗೆ ಲಾಠಿಚಾರ್ಚ್‌: ಬಿಜೆಪಿ ಮತ ಕೇಳಿದಾಗ ನೆನಪಿಸಿಕೊಳ್ಳಿ, ರಾಹುಲ್

ಪಿಟಿಐ
Published 5 ಡಿಸೆಂಬರ್ 2021, 8:33 IST
Last Updated 5 ಡಿಸೆಂಬರ್ 2021, 8:33 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಲಖನೌನಲ್ಲಿ ಉದ್ಯೋಗಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂಬ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಉದ್ಯೋಗ ಕೇಳಿದವರ ಮೇಲೆ ಲಾಠಿ ಚಾರ್ಜ್‌ ನಡೆಸಿದೆ. ಇದನ್ನು ಜನರು ಬಿಜೆಪಿ ಮತಯಾಚನೆಗೆ ಬಂದಾಗ ನೆನಪಿಸಿಕೊಳ್ಳಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

2019ರ ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ ನ್ಯಾಯಯುತವಾಗಿ ನಡೆದಿಲ್ಲ ಎಂದು ಆರೋಪಿಸಿ ಲಖನೌನಲ್ಲಿ ಶನಿವಾರ ಸಂಜೆ ಮೇಣದಬತ್ತಿ ಅಭಿಯಾನ ನಡೆಸಿದ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ADVERTISEMENT

'ಉದ್ಯೋಗಕ್ಕಾಗಿ ಎದಿರು ನೋಡುತ್ತಿರುವ ಮಂದಿಗೆ ಉತ್ತರ ಪ್ರದೇಶ ಸರ್ಕಾರ ಲಾಠಿಯಿಂದ ಹಲ್ಲೆ ನಡೆಸಿದೆ. ಇದನ್ನು ಬಿಜೆಪಿ ಮತಯಾಚನೆಗೆ ಬಂದಾಗ ಜನರು ನೆನಪಿಸಿಕೊಳ್ಳಬೇಕು' ಎಂದು ರಾಹುಲ್‌ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಘಟನೆಯ ವಿಡಿಯೊವನ್ನು ರಾಹುಲ್‌ ಗಾಂಧಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.