ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ: ರಾಹುಲ್ ಗಾಂಧಿ

ಪಿಟಿಐ
Published 6 ಮೇ 2020, 9:19 IST
Last Updated 6 ಮೇ 2020, 9:19 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದ ಈ ಸಂದರ್ಭದಲ್ಲಿ ಎಲ್ಲರೂ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬದಲು ಏರಿಕೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಕೋವಿಡ್–19 ವಿರುದ್ಧದ ಹೋರಾಟವು ಕೋಟ್ಯಂತರ ಸಹೋದರ ಸಹೋದರಿಯರನ್ನು ಆರ್ಥಿಕವಾಗಿ ಕಷ್ಟಕ್ಕೀಡುಮಾಡಿದೆ. ಇಂತಹ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡುವ ಬದಲು ಪೆಟ್ರೋಲ್, ಡೀಸೆಲ್ ದರವನ್ನು ಕ್ರಮವಾಗಿ ₹10 ಹಾಗೂ ₹13ರಷ್ಟು ಹೆಚ್ಚಿಸುವ ನಿರ್ಧಾರ ಸರಿಯಲ್ಲ. ಈ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ

ADVERTISEMENT

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ ₹10 ಹಾಗೂ ₹13 ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಹೇಳಿತ್ತು. ಆದರೆ, ಈ ಸುಂಕ ಹೆಚ್ಚಳದಿಂದ ಮಾರಾಟ ದರದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ತೈಲ ಕಂಪನಿಗಳಿಗೆ ಮಾತ್ರ ಹೊರೆಯಾಗಲಿದೆ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.