ADVERTISEMENT

ಇ.ಡಿ ಸಮನ್ಸ್: ಕಾಲಾವಕಾಶ ಕೋರಿದ ರಾಹುಲ್ ಗಾಂಧಿ

ಐಎಎನ್ಎಸ್
Published 1 ಜೂನ್ 2022, 11:18 IST
Last Updated 1 ಜೂನ್ 2022, 11:18 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೆಚ್ಚಿನ ಕಾಲಾವಕಾಶ ಕೋರಿದ್ದಾರೆ ಎಂದು ವರದಿಯಾಗಿದೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮುಖಂಡ ರಾಹುಲ್‌ ಗಾಂಧಿ ಅವರಿಗೆ ಬುಧವಾರ ಇ.ಡಿ ಸಮನ್ಸ್‌ ಜಾರಿ ಮಾಡಿದೆ.

ರಾಹುಲ್ ಗಾಂಧಿಗೆ ಜೂನ್ 2 ಹಾಗೂ ಸೋನಿಯಾ ಗಾಂಧಿಗೆ ಜೂನ್ 8ರಂದು ದೆಹಲಿಯ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನಾಳೆ (ಗುರುವಾರ) ತನಿಖೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಮನ್ಸ್ ಪತ್ರ ದೊರಕಿದ ಕೂಡಲೇ ರಾಹುಲ್ ಗಾಂಧಿ ಇ.ಡಿಗೆ ಪತ್ರ ಬರೆದಿದ್ದಾರೆ.

ಆದರೆ ಸೋನಿಯಾ ಗಾಂಧಿ ಯಾವುದೇ ಕೋರಿಕೆ ಸಲ್ಲಿಸಿಲ್ಲ. ಹಾಗಾಗಿ ಜೂನ್ 8ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.