ADVERTISEMENT

ಗೃಹ ಸಚಿವಾಲಯ ಏನು ಮಾಡುತ್ತಿದೆ: ನಾಗಾಲ್ಯಾಂಡ್ ನಾಗರಿಕರ ಹತ್ಯೆಗೆ ರಾಹುಲ್ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2021, 8:27 IST
Last Updated 5 ಡಿಸೆಂಬರ್ 2021, 8:27 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಇದು ಹೃದಯವಿದ್ರಾವಕ ಘಟನೆಯಾಗಿದೆ. ಕೇಂದ್ರ ಸರ್ಕಾರವು ಸರಿಯಾದ ಪ್ರತಿಕ್ರಿಯೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ನಮ್ಮ ನೆಲದಲ್ಲಿ ನಾಗರಿಕರಾಗಲೀ ಭದ್ರತಾ ಸಿಬ್ಬಂದಿಯಾಗಲೀ ಸುರಕ್ಷಿತರಾಗಿಲ್ಲ ಎಂದ ಮೇಲೆ ಗೃಹ ಸಚಿವಾಲಯವು ಏನು ಮಾಡುತ್ತಿದೆ’ ಎಂದು ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ADVERTISEMENT

ಶನಿವಾರ ರಾತ್ರಿ ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯ ಆಟಿಂಗ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ನಾಗರಿಕರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.