ADVERTISEMENT

ಕೃಷಿ ವಿರೋಧಿ ಕಾನೂನು ಹಿಂಪಡೆಯಿರಿ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಆಗಸ್ಟ್ 2021, 9:13 IST
Last Updated 27 ಆಗಸ್ಟ್ 2021, 9:13 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ಕೃಷಿ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ.

ಈ ನಡುವೆ ರೈತರ ಪರ ಮಗದೊಮ್ಮೆ ಧ್ವನಿ ಎತ್ತಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಬಂಡವಾಳಶಾಹಿಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.

'ಹೊಲಗಳು ಮರಳು ಆಗಲು ಬಿಡುವುದಿಲ್ಲ, ಅದನ್ನು ಅವರ (ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ' ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಕೃಷಿ ಭೂಮಿಯನ್ನು ತಮ್ಮ ಸ್ನೇಹಿತರಿಗೆ ಹಸ್ತಾಂತರಿಸುವ ಹುನ್ನಾರವನ್ನು ಹೊಂದಿದೆ. ಕೃಷಿ ವ್ಯವಸ್ಥೆಯನ್ನು ನಾಶಗೊಳಿಸಲು ನೂತನ ಕಾನೂನು ರಚಿಸಲಾಗಿದೆ ಎಂದು ರಾಹುಲ್ ಗಾಂಧಿ ಈ ಹಿಂದೆಯೇ ವಾಗ್ದಾಳಿ ನಡೆಸಿದ್ದರು.

ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಸಿಂಘು ಗಡಿಯಲ್ಲಿ ರೈತರು ಆರಂಭಿಸಿರುವ ಹೋರಾಟವು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.