ADVERTISEMENT

ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ ರಾಹುಲ್‌ ಭಾಷಣ: ಅಧೀರ್ ರಂಜನ್ ಚೌಧರಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 1:27 IST
Last Updated 3 ಫೆಬ್ರುವರಿ 2022, 1:27 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಸಂಸತ್‌ನಲ್ಲಿ ಮಾಡಿದ ಭಾಷಣವು ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ ಎಂದು ಸಂಸದ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ಭಾಷಣ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ’ ಎಂದು ಹೇಳಿದ್ದಾರೆ.

‘ಪೆಗಾಸಸ್ ಕೇವಲ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯವಲ್ಲ. ಅದು ರಾಷ್ಟ್ರೀಯ ಸಮಸ್ಯೆಯಾಗಿದೆ. ಅದರ ಕುರಿತು ಸದನದೊಳಗೆ ಚರ್ಚಿಸುವುದು ನಮ್ಮ ಹಕ್ಕು ಎಂಬುದನ್ನು ಬಿಜೆಪಿಯವರು ಅರಿಯಬೇಕು’ ಎಂದೂ ಚೌಧರಿ ತಿಳಿಸಿದ್ದಾರೆ.

ADVERTISEMENT

ಕೇಂದ್ರದ ವಿರುದ್ಧ ಸಂಸತ್ತಿನಲ್ಲಿ ವಾಗ್ದಾಳಿ ನಡೆಸಿದ್ದ ರಾಹುಲ್‌ ಗಾಂಧಿ, ‘ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ವ್ಯಕ್ತಿಯೊಬ್ಬ ರಾಜಾಡಳಿತ ನಡೆಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

‘ರಾಜ್ಯಗಳ ಒಕ್ಕೂಟದಲ್ಲಿ, ಮಾತುಕತೆ ಮತ್ತು ಸಮಾಲೋಚನೆಯ ಮೂಲಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಬಿಜೆಪಿಯ ದೋಷಪೂರಿತ ದೃಷ್ಟಿಕೋನವು ನಮ್ಮ ದೇಶವನ್ನು ದುರ್ಬಲಗೊಳಿಸಿದೆ’ ಎಂದು ರಾಹುಲ್‌ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.