ನವದೆಹಲಿ: ಕೇಂದ್ರ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿದೆ ಎಂಬ ಕಾಂಗ್ರೆಸ್ ಸಂಸದರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಖಂಡಿಸಿದ್ದಾರೆ.
‘ಮೋದಿ ಸರ್ಕಾರವು ₹ 65,000 ಸಾಲ ಮನ್ನಾ ಮಾಡಿದೆ’ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ಜಾವಡೇಕರ್, ‘ಸಾಲ ಮನ್ನಾ ಬೇರೆ, ಲೆಕ್ಕದ ಪುಸ್ತಕಗಳಿಂದ ಅದನ್ನು ತೆಗೆದುಹಾಕುವುದು ಬೇರೆ’ ಎಂದು ವಿವರಿಸಿದ್ದಾರೆ.
‘ರಾಹುಲ್ ಗಾಂಧಿ ಅವರು ಚಿದಂಬರಂ ಅವರಂಥವರಿಂದ ಟ್ಯೂಷನ್ ತೆಗೆದುಕೊಳ್ಳಬೇಕಿದೆ. ಎರಡರ ನಡುವೆ ಇರುವ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಜಾವಡೇಕರ್ ಸಲಹೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.