ADVERTISEMENT

ಬಿಜೆಪಿ ಆದಾಯ ಶೇಕಡಾ 50ರಷ್ಟು ಏರಿಕೆ; ರಾಹುಲ್ ಗಾಂಧಿ ಆಕ್ರೋಶ

ಪಿಟಿಐ
Published 28 ಆಗಸ್ಟ್ 2021, 11:07 IST
Last Updated 28 ಆಗಸ್ಟ್ 2021, 11:07 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: 2019-20ನೇ ಸಾಲಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆದಾಯದಲ್ಲಿ ಶೇಕಡಾ 50ರಷ್ಟು ಏರಿಕೆಯಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಬಿಜೆಪಿ ಆದಾಯವು ಶೇಕಡಾ 50ರಷ್ಟು ಏರಿಕೆಯಾಗಿದೆ. ಹಾಗಿದ್ದರೆ ನಿಮ್ಮದ್ದು?' ಎಂದು ಪ್ರಶ್ನಿಸಿದ್ದಾರೆ.

ಎಡಿಆರ್ ವರದಿ ಪ್ರಕಾರ, ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಆದಾಯವು ಶೇಕಡಾ 50ರಷ್ಟು ಏರಿಕೆಯಾಗಿದೆ.

ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ ಬಿಜೆಪಿ ಆದಾಯದಲ್ಲಿ ಗಣನೀಯ ಏರಿಕೆಯಾಗಿರುವ ಬಗ್ಗೆ ರಾಹುಲ್ ಗಾಂಧಿ ಆಶ್ಚರ್ಯ ಹಾಗೂ ಆತಂಕ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಬಾಂಡ್‌ಗಳಿಂದ ಆಳುವ ಪಕ್ಷಕ್ಕೆ ಹಣದ ಹೊಳೆ ಹರಿದು ಬರುತ್ತಿದೆ. ಇದನ್ನು ವಿರೋಧಿಸಿರುವ ಕಾಂಗ್ರೆಸ್, ಇದರಿಂದಲೇ ಬಿಜೆಪಿ ಅಧಿಕಾರಕ್ಕೇರಲು ನೆರವಾಗಿದೆ ಎಂದು ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.