ADVERTISEMENT

ಆರೋಗ್ಯ ಸಚಿವರ ಬದಲಾವಣೆ: ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲವೇ?– ರಾಹುಲ್

ಪಿಟಿಐ
Published 8 ಜುಲೈ 2021, 9:49 IST
Last Updated 8 ಜುಲೈ 2021, 9:49 IST
ರಾಹುಲ್ ಗಾಂಧಿ: ಪಿಟಿಐ ಚಿತ್ರ
ರಾಹುಲ್ ಗಾಂಧಿ: ಪಿಟಿಐ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರದಲ್ಲಿ ನೂತನ ಆರೋಗ್ಯ ಸಚಿವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ಏನಾದರೂ ಬದಲಾವಣೆ ಆಗುತ್ತದೆಯೇ? ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

"#Change" ಎಂಬ ಹ್ಯಾಶ್‌ಟ್ಯಾಗ್ ಬಳಸಿರುವ ರಾಹುಲ್ ಗಾಂಧಿ, ‘ಇದರರ್ಥ ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲ ಎಂಬುದೇ?’ಎಂದು ಪ್ರಶ್ನಿಸಿದ್ದಾರೆ.

ದೇಶದ ಲಸಿಕಾ ಅಭಿಮಾನವು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ ಮತ್ತು ಅದಕ್ಕೆ ವೇಗ ನೀಡಬೇಕಿದೆ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸುತ್ತಲೇ ಇದೆ.

ADVERTISEMENT

ರಾಹುಲ್ ಗಾಂಧಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಗೌರವ ಭಾಟಿಯಾ, ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ವ್ಯಕ್ತಿ, ಟೀಕೆ ಮಾಡಬೇಕು ಎಂದು ಮಾಡುತ್ತಾರೆ. ರಚನಾತ್ಮಕ ಟೀಕೆಗಳಿದ್ದರೆ ಖಂಡಿತಾ ಸ್ವೀಕರಿಸುತ್ತೇವೆ ಎಂದಿದ್ದಾರೆ.

ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರನ್ನು ಕೈಬಿಡುವ ಮೂಲಕ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಈ ಹಿಂದೆ ಟೀಕಿಸಿತ್ತು.

ಕೆಲವು ರಾಜ್ಯಗಳು ಲಸಿಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿರುವುದರಿಂದ ಕೊರತೆ ನೀಗಿಸುವುದು ಹೊಸ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಅವರ ಮೊದಲ ಕಾರ್ಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.