ADVERTISEMENT

ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲು ಹಿರಿಯ ನಾಯಕರ ಕೋರಿಕೆ: ಪರಿಗಣಿಸುವೆ ಎಂದ ರಾಹುಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2021, 11:13 IST
Last Updated 16 ಅಕ್ಟೋಬರ್ 2021, 11:13 IST
ರಾಹುಲ್ ಗಾಂಧಿ: ಪಿಟಿಐ ಚಿತ್ರ
ರಾಹುಲ್ ಗಾಂಧಿ: ಪಿಟಿಐ ಚಿತ್ರ   

ನವದೆಹಲಿ: ರಾಹುಲ್ ಗಾಂಧಿಯನ್ನು ಮತ್ತೊಮ್ಮೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಕಾಂಗ್ರೆಸ್‌ನ ನಾಯಕರು ಅವಿರೋಧವಾಗಿ ಒಪ್ಪಿಕೊಂಡಿದ್ದು, ಅವರ ಅಭಿಪ್ರಾಯವನ್ನು ಪರಿಗಣಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಎಎನ್‌ಐ ಟ್ವಿಟ್ ಮಾಡಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಾದಿ ಅಲಂಕರಿಸುವಂತೆ ಸಿಡಬ್ಲ್ಯುಸಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿಗೆ ಮನವಿ ಮಾಡಿದ್ದು, ಕೋರಿಕೆಯನ್ನು ಪರಿಗಣಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ತಿಳಿದು ಬಂದಿದೆ.

ಇದೇವೇಳೆ, ಪಕ್ಷದ ನಾಯಕರಿಂದ ಸಿದ್ಧಾಂತದ ಮಟ್ಟದಲ್ಲಿ ನನಗೆ ಸ್ಪಷ್ಟತೆ ಬೇಕು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ. ಚುನಾವಣೆಯವರೆಗೂ ರಾಹುಲ್ ಗಾಂಧಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಕೆಲವು ನಾಯಕರು ಹೇಳಿದರು ಎಂದು ಮೂಲಗಳು ತಿಳಿಸಿವೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.