ADVERTISEMENT

ಕೇಜ್ರಿವಾಲ್ ಬಂಧನ: ಕುಟುಂಬದವರನ್ನು ಭೇಟಿ ಮಾಡಲಿರುವ ರಾಹುಲ್ ಗಾಂಧಿ

ಏಜೆನ್ಸೀಸ್
Published 22 ಮಾರ್ಚ್ 2024, 5:35 IST
Last Updated 22 ಮಾರ್ಚ್ 2024, 5:35 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಪಿಟಿಐ ಚಿತ್ರ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಕುಟುಂಬದವರನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ರಾಹುಲ್ ಗಾಂಧಿ ಅವರು ಕೇಜ್ರಿವಾಲ್ ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಇಡೀ ಕಾಂಗ್ರೆಸ್ ಪಕ್ಷ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ.

ಕಾನೂನು ನೆರವು ನೀಡಲು ರಾಹುಲ್ ಗಾಂಧಿ ಶುಕ್ರವಾರ ಕೇಜ್ರಿವಾಲ್ ಅವರ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ‌‌‌ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ಇದೇ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಹಾಗೂ ಸಂಸದ ಸಂಜಯ್ ಸಿಂಗ್ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.