ADVERTISEMENT

50ನೇ ವಸಂತಕ್ಕೆ ಕಾಲಿಟ್ಟ ರಾಹುಲ್‌ ಗಾಂಧಿ: ಗಣ್ಯರಿಂದ ಶುಭ ಹಾರೈಕೆ

ಏಜೆನ್ಸೀಸ್
Published 19 ಜೂನ್ 2020, 7:11 IST
Last Updated 19 ಜೂನ್ 2020, 7:11 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಶುಕ್ರವಾರ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ರಾಜಕೀಯ ಗಣ್ಯರು ಸೇರಿದಂತೆ ಹಲವು ಪ್ರಮುಖರು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ದೇಶದಲ್ಲಿ ಕೊರೊನಾ ಅಟ್ಟಹಾಸ ಹಾಗೂ ಲಡಾಖ್‌ ಗಡಿಯಲ್ಲಿ ದೇಶದ 20 ಯೋಧರು ಹುತಾತ್ಮರಾದ ಹಿನ್ನೆಲೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆಇರಲು ರಾಹುಲ್‌ ನಿರ್ಧರಿಸಿದ್ದಾರೆ.

ADVERTISEMENT

ಈ ಕುರಿತು ಎಲ್ಲಾ ರಾಜ್ಯ ಘಟಕಗಳಿಗೆ ಮಾಹಿತಿ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ,ಬಡವರಿಗೆ ಆಹಾರ ಕಿಟ್‌ಗಳನ್ನು ವಿತರಿಸಿ. ಆದರೆ, ಸಂಭ್ರಮಾಚರಣೆ ಬೇಡ ಎಂದು ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡ ಬಡವರಿಗೆ ಸಹಾಯ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

***

‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಾನು ಅವರಿಗೆ ಸಂತೋಷ, ಉತ್ತಮ ಆರೋಗ್ಯ ಸಿಗಲೆಂದು ಬಯಸುತ್ತೇನೆ. ಈ ಕೋವಿಡ್‌ ಸಂಕಷ್ಟದ ಸಮಯದಲ್ಲಿ, ಸಾಮಾನ್ಯ ಜನರ ಧ್ವನಿಯಾಗಬೇಕೆಂಬ ಅವರಬದ್ಧತೆ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ’ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

**

‘ರಾಹುಲ್‌ ಗಾಂಧಿ ಒಬ್ಬ ಸಹಾನುಭೂತಿಯ ನಾಯಕ, ಅವರು ಸಾಮಾಜಿಕ ಮತ್ತು ಆರ್ಥಿಕವಾಗಿ ಜನರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ. ಸಾಮಾಜಿಕ ಸಮಾನತೆ ಕುರಿತು ಅವರಿಗಿರುವ ಬದ್ಧತೆಯುವಜನರನ್ನು ಪ್ರೇರೇಪಿಸುತ್ತದೆ. ಜನ್ಮದಿನದಂದು ಅವರಿಗೆ ನನ್ನ ಅಭಿನಂದನೆಗಳು’ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.