ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿಮ್ಮೆಲ್ಲರ ಭವಿಷ್ಯವನ್ನು ಹಾಳು ಮಾಡಿದ್ದಾರೆ ಎಂದು ಯುವಕರನ್ನು ಉದ್ದೇಶಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹರಿಹಾಯ್ದಿರುವ ರಾಹುಲ್, ‘ಪ್ರೀತಿಯ ಯುವಜನರೆ, ಮೋದಿ ಮತ್ತು ಶಾ ನಿಮ್ಮ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಆರ್ಥಿಕ ಸಂಕಷ್ಟಮತ್ತು ನಿರುದ್ಯೋಗದ ಬಗ್ಗೆ ನಿಮಗಿರುವಕೋಪವನ್ನು ಸಹಿಸಿಕೊಳ್ಳಲು ಅವರಿಗೆಸಾಧ್ಯವಾಗುತ್ತಿಲ್ಲ. ಆ ಕಾರಣಕ್ಕಾಗಿ ಅವರು ದ್ವೇಷದ ಹಿಂದೆ ಅಡಗಿಕೊಂಡು ಭಾರತವನ್ನು ಇಬ್ಭಾಗಮಾಡುತ್ತಿದ್ದಾರೆ‘ ಎಂದು ತಿಳಿಸಿದ್ದಾರೆ.
ಪ್ರತಿ ಭಾರತೀಯನನ್ನು ಪ್ರೀತಿಯಿಂದ ಕಾಣುವ ಮೂಲಕ ನಾವು ಅವರನ್ನು ಸೋಲಿಸಬಹುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.